
ಜಿಲ್ಲೆಯ ಜಿಲ್ಲಾ ಕಛೇರಿಗಳ ಸಂಕೀರ್ಣ ನಿರ್ಮಾಣ ಮಾಡಲು ಪರಿಷ್ಕೃತ ಅಂದಾಜು 49 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ಮೂಲಕ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲಾ ಸಂಕೀರ್ಣ ಕಟ್ಟಡದ ಪೀಠೋಪಕರಣಗಳು ಮತ್ತು ಮೂಲಭೂತ ಸೌಕರ್ಯಗಳನ್ನು ಸೇರಿದಂತೆ ಇತರೆ ಕಾಮಗಾರಿಗಳಿಗೆ ಅಂದಾಜು 49 ಕೋಟಿ ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.









