
ವಿಜಯಪುರ: ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಲೋನಿ ಭಾಗವಹಿಸಿ ಮಾತನಾಡಿದರು. ಅವರು, “ಗಾಂಧೀಜಿ ದೇಶಕ್ಕೆ ಸ್ವಾತಂತ್ರ್ಯ ತಂದ ಮಹಾನ್ ವ್ಯಕ್ತಿ. ಶಾಂತಿ ಮತ್ತು ಅಹಿಂಸೆಯ ಮೂಲಕ ರಾಮರಾಜ್ಯದ ಕನಸು ಕಾಣುತ್ತಿದ್ದ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು” ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದು, ಗಾಂಧೀಜಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.










