
ಸಿಂದಗಿ: ಕೃಷಿ ಉತ್ಪನ್ನ ಮಾರುಕಟ್ಟೆಯ ಅಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಪ್ರಗತಿ ಪರಿಶೀಲನೆ ಸಭೆಯನ್ನು ಸಚಿವ ಶಿವಾನಂದ ಪಾಟೀಲರು ನಿನ್ನೆ ಸಿಂದಗಿ ಪಟ್ಟಣದಲ್ಲಿ ನಡೆಸಿದರು.
ಈ ಸಂದರ್ಭದಲ್ಲಿ ಅವರು ಮಾರುಕಟ್ಟೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಕೃಷಿ ಮಾರುಕಟ್ಟೆಯ ಸ್ಥಿತಿ ಮತ್ತು ಅವಶ್ಯಕತೆಗಳ ಬಗ್ಗೆ ಮಾಹಿತಿ ಪಡೆದರು. “ರೈತರ ಅನುಕೂಲಕ್ಕಾಗಿ ಮಾರುಕಟ್ಟೆಯಲ್ಲಿ ರೈತ ಭವನ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಮಾರುಕಟ್ಟೆ ಪ್ರಾಧಿಕಾರದ ಸದಸ್ಯರು ಭಾಗಿಯಾಗಿದ್ದರು.










