
ವಿಜಯಪುರ: ವಿಜಯಪುರ ನಗರದ ಗೋಲಗುಮ್ಮಟ ಬಳಿಯ ರೈಲ್ವೆ ಹಳಿಯಲ್ಲಿ ಯುವಕನೊಬ್ಬ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಮೃತ ಯುವಕನ ಹೆಸರು ಮತ್ತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಬುಧವಾರ ಸಾಯಂಕಾಲ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಘಟನೆ ವಿಜಯಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.










