
ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಟ್ಟೂರು (ಕೆ) ಸಮೀಪ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿಗೆ ಕೆಎಸ್‌ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿದ್ದಾರೆ.ಅಪಘಾತದಲ್ಲಿ ಮೃತರಾದವರು ಸೋಮಶೇಖರ್ (55) ಮತ್ತು ಪ್ರಕಾಶ್ (28) ಎಂದು ಗುರುತಿಸಲಾಗಿದೆ. ತಾಯಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ನಿರೀಕ್ಷೆಯಲ್ಲಿದೆ.










