
ಇಂಡಿ ಪಟ್ಟಣದ ಕುಂಬಾರ ಓಣಿಯ ರಸ್ತೆಯಲ್ಲಿ ಪಡಿತರ ಅಕ್ಕಿಯ ಅಕ್ರಮ ಸಾಗಾಟ ಬಯಲಾಗಿರುವ ಘಟನೆ ನಿನ್ನೆ ಬೆಳಕಿಗೆ ಬಂದಿದೆ.ಆಹಾರ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಸಂಯುಕ್ತ ದಾಳಿಯ ವೇಳೆ, ಆರೋಪಿ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳದಲ್ಲೇ ಬಿಟ್ಟಿರುವ ಗೂಡ್ಸ್ ವಾಹನದಿಂದ 2,590 ಕೆಜಿ ಪಡಿತರ ಅಕ್ಕಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಇದರ ಮೌಲ್ಯ ರೂ. 75,110 ಆಗಿದ್ದು, ಸುಮಾರು ಮೂರು ಲಕ್ಷ ರೂಪಾಯಿ ಮೌಲ್ಯದ ಗೂಡ್ಸ್ ವಾಹನ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಕುರಿತು ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯಿಂದ ಪಟ್ಟಣದಲ್ಲಿ ಅಕ್ರಮ ಪಡಿತರ ಸಾಗಾಟದ ಬಗ್ಗೆ ಚರ್ಚೆ ಶುರುವಾಗಿದೆ.










