ಸಿಂದಗಿ: ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 52 ಅಂಗನವಾಡಿ ಕಾರ್ಯಕರ್ತೆ ಮತ್ತು 129 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನ. 9ರವರೆಗೆ ಕಾಲಾವಕಾಶ ನೀಡಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದೆ. ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ 2024, ಡಿ. 26 ರಿಂದ 2025 ಜ. 5 ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್‌ನಲ್ಲಿ ಇಲಾಖೆ ವತಿಯಿಂದಲೇ ಅವಕಾಶ ನೀಡಿ ಆದೇಶಿಸಲಾಗಿದೆ.










