
ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿ ನಡೆದ ಚಾಕು–ತಲ್ವಾರ್ ದಾಳಿಯಲ್ಲಿ ಗಾಯಗೊಂಡಿದ್ದ ಯುವಕ ಮುತ್ತಣ್ಣ ಗುಡಬಲಿ (22) ಚಿಕಿತ್ಸೆ ಫಲಿಸದೇ ಸೋಮವಾರ ಮೃತಪಟ್ಟಿದ್ದಾನೆ.
ಮಾಹಿತಿಯ ಪ್ರಕಾರ, ಭಾನುವಾರ ರಾತ್ರಿ ಸ್ನೇಹಿತನ ಹುಟ್ಟುಹಬ್ಬದ ಸಂಭ್ರಮ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ಮುತ್ತಣ್ಣ, ಮನೆಯ ಮುಂದೆ ಕೂಗು ಹಾಕಿದ್ದಕ್ಕೆ ಆಕ್ರೋಶಗೊಂಡ ಮಹೇಶ್ ನಾರಿ, ವಿಶಾಲ್ ನಾರಿ, ಸಿದ್ದಪ್ಪ ಹೆಗ್ಗನಾಯಕ್ ಮತ್ತು ಪ್ರಕಾಶ ಮುತ್ತೆಣ್ಣವರು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಗಂಭೀರ ಗಾಯಗೊಂಡಿದ್ದ ಮುತ್ತಣ್ಣನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಗೆ ಮೃತಪಟ್ಟಿದ್ದಾನೆ.ಈ ಘಟನೆ ಹಿನ್ನೆಲೆಯಲ್ಲಿ ಹುದಲಿ ಗ್ರಾಮದಲ್ಲಿ ಶೋಕಸನ್ನಿವೇಶ ನಿರ್ಮಾಣವಾಗಿದ್ದು, ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.










