
ಕೆಟ್ಟು ನಿಂತ ಸಿಮೆಂಟ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಹಿನ್ನೆಲೆ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣ ಬಳಿ ನಡೆದಿದೆ. ಮೃತರನ್ನು ಬಿಜೆಪಿ ಮುಖಂಡ ಕೃಷ್ಣ ಲಕ್ಷ್ಮಣ (35) ಎಂದು ಗುರುತಿಸಲಾಗಿದೆ. ಕೃಷ್ಣ ಲಕ್ಷ್ಮಣ ಅವರು ಚಿಂಚೋಳಿ ತಾಲೂಕಿನ ಮರಾಠ ಸಮಾಜದ ತಾಲೂಕಿನ ಅಧ್ಯಕ್ಷರಾಗಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ ಮಿರಿಯಾಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಂಚೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.









