
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೂಲಕ ಜನತೆ ಅನುಭವಿಸುತ್ತಿರುವ ಕಿರುಕುಳವನ್ನು ತಡೆಗಟ್ಟಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಂಗಳವಾರ ಈ ಕುರಿತು ಮಾತನಾಡಿ, ಮುಂಬರುವ ದಿನಗಳಲ್ಲಿ ಸುಗ್ರೀವಾಜ್ಞೆ ಜಾರಿ ಮಾಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.
ಈ ಕುರಿತಂತೆ ಪೊಲೀಸರು ಯಾವುದೇ ದೂರು ಇಲ್ಲದಿದ್ದರೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಳ್ಳಬೇಕೆಂದು ಅವರು ಸೂಚನೆ ನೀಡಿದರು. ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಪ್ರಸ್ತಾಪಿಸಲು ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ನಿಟ್ಟಿನಲ್ಲಿ ಹೊಸ ಕಾನೂನು ರೂಪಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಮೂಲಕ ಜನಸಾಮಾನ್ಯರು ಆರ್ಥಿಕ ನಷ್ಟಕ್ಕೆ ಒಳಗಾಗದಂತೆ ಮತ್ತು ಅತಿಯಾದ ಬಡ್ಡಿದಾರರ ದಬ್ಬಾಳಿಕೆಯಿಂದ ಮುಕ್ತರಾಗುವಂತೆ ಸರ್ಕಾರ ಕಾರ್ಯಾಚರಣೆ ನಡೆಸುತ್ತಿದೆ.










