
ಇತ್ತೀಚೆಗೆ ಗದಗದಲ್ಲಿ ನಡೆದ ರಾಜ್ಯಮಟ್ಟದ ಪಿಯುಸಿ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಾಘವೇಂದ್ರ ವಾಲೀಕಾರ ಭಾಗವಹಿಸಿ 77 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಇಂಡಿ ಶಾಸಕರಾದ ಯಶವಂತ್ರಾಯಗೌಡ ಪಾಟೀಲ ಹಾಗೂ ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರು ಅಭಿನಂದಿದ್ದಾರೆ.










