ಅಕ್ರಮವಾಗಿ ಗೋಡೌನಲ್ಲಿ ಸಂಗ್ರಹಿಸಿಟ್ಟಿದ ಪಡಿತರ ಅಕ್ಕಿಯನ್ನು ಸಾಗಾಟ ವೇಳೆ ಪೊಲೀಸರು ದಾಳಿಗೈದು ಲಕ್ಷಾಂತರ ಮೌಲ್ಯದ ಅಕ್ಕಿ ಜಪ್ತಿಗೈದಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಸೊಲ್ಲಾಪುರದ ಗೋಡೌನನಿಂದ ಪಡಿತರ ಅಕ್ಕಿಯನ್ನು ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿದ್ದಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು 5, 12, 470 ಮೌಲ್ಯದ 24890 ಕೆಜಿ ಅಕ್ಕಿ ಹಾಗೂ ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಝಳಕಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









